[ad_1]
AAI ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಏಪ್ರಿಲ್ 25 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಯಾರಾದರೂ ಮೇ 24 ರಂದು ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬಹುದು. ಮೇ. 24 ಕೊನೆಯ ದಿನಾಂಕವಾಗಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗ ಸ್ಥಳಾವಕಾಶ
ಈ ನೇಮಕಾತಿಯ ಮೂಲಕ ಒಟ್ಟು 309 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನೀವು ಸಹ ಇಲ್ಲಿ ಕೆಲಸ ಮಾಡಲು ಬಯಸಿದರೆ, ಕೆಳಗೆ ನೀಡಲಾದ ಅಂಶಗಳನ್ನು ಎಚ್ಚರಿಕೆಯಿಂದ ಓದಿದ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗ ಪಡೆಯಲು ಅರ್ಹತೆ:
ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಎಸ್ಸಿ (ಭೌತಶಾಸ್ತ್ರ ಮತ್ತು ಗಣಿತದೊಂದಿಗೆ) ಅಥವಾ ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು. ಆಗ ಮಾತ್ರ ಅವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
AAI ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಯಸ್ಸಿನ ಮಿತಿ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಈ ನೇಮಕಾತಿಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 27 ವರ್ಷಗಳು. ಭಾರತ ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅರ್ಜಿ ಶುಲ್ಕ
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಪಡೆಯುವುದು ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅನ್ಲೈನ್ನಲ್ಲಿ ಲಿಖಿತ ಪರೀಕ್ಷೆ ನೀಡಲಾಗುತ್ತೆ. ನಂತರ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆದರೆ ಅವರ ದಾಖಲೆ ಪರಿಶೀಲನೆ ಮಾಡಲಾಗುತ್ತೆ. ನಂತರ ಧ್ವನಿ ಪರೀಕ್ಷೆ ಜೊತೆಗೆ ಅನ್ವಯಿಸಿದ್ರೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಆಯ್ಕೆಗೊಂಡವರ ಸಂಬಳ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಆಯ್ಕೆಗೊಂಡವರಿಗೆ 1,40,000 ವರೆಗೆ ಸಂಬಳ ನೀಡಲಾಗುತ್ತದೆ. ಹೆಚ್ಚುವರಿ ಭತ್ಯೆಗಳನ್ನು ನೀಡಲಾಗುತ್ತದೆ.
ಅಧಿಸೂಚನೆ ಮತ್ತು ಅರ್ಜಿ ಲಿಂಕ್ ಅನ್ನು ಇಲ್ಲಿ ನೋಡಿ.
AAI ಗೆ ಅರ್ಜಿ ಸಲ್ಲಿಸುವುದು ಹೇಗೆ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಕೆಲಸ ಮಾಡಲು ನಿಮಗೂ ಆಸಕ್ತಿ ಇದ್ದರೆ, ಏಪ್ರಿಲ್ 25 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾದ ನಂತರ ಅರ್ಜಿ ಸಲ್ಲಿಸಬಹುದು.
April 21, 2025 12:56 PM IST
AAI Recruitment 2025: ಪದವೀಧರರಿಗೆ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಬಂಪರ್ ಉದ್ಯೋಗಾವಕಾಶ; ಅವಕಾಶ ಮಿಸ್ ಮಾಡ್ಕೋಬೇಡಿ!
Source link