CISF ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶ, ಲಿಖಿತ ಪರೀಕ್ಷೆ ಇಲ್ಲ, ನೇರ ಆಯ್ಕೆ! ಸಂಬಳ 81000 | CISF invites applications for 30 Head Constable posts opportunity for women

[ad_1]

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಕ್ರೀಡಾ ಕೋಟಾದಡಿ ಖಾಲಿ ಇರುವ 30 ಹೆಡ್‌ ಕಾನ್ಸ್‌ಟೇಬಲ್‌ (ಜೆನೆರಲ್‌ ಡ್ಯೂಟಿ) ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಅಂದಹಾಗೆ ಇವು ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಮೀಸಲಿರುವ ಹುದ್ದೆಗಳಾಗಿವೆ. ಹಾಗೂ ಕ್ರೀಡಾ ಕೋಟಾದ ಹುದ್ದೆಗಳಾಗಿದ್ದು, ನೀವು ಸಹ ಈ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದು, ಈ ಕೆಳಗಿನ ಇತರೆ ಸಾಮಾನ್ಯ ಅರ್ಹತೆಗಳನ್ನು ಹೊಂದಿದ್ದಲ್ಲಿ, ಈಗಲೇ ಅರ್ಜಿ ಸಲ್ಲಿಸಿ.

ನೇಮಕಾತಿಯ ಪ್ರಮುಖ ವಿವರಗಳು:

1.ಅರ್ಜಿ ಶುಲ್ಕ: ಯಾವುದೇ ಅಭ್ಯರ್ಥಿಗೆ ಅರ್ಜಿ ಶುಲ್ಕವಿಲ್ಲ; ಇದು ಸಂಪೂರ್ಣವಾಗಿ ಉಚಿತವಾಗಿದೆ.

2.ವಯೋಮಿತಿ (ಆಗಸ್ಟ್ 1, 2025 ರಂತೆ):

  • ಕನಿಷ್ಠ ವಯಸ್ಸು: 18 ವರ್ಷಗಳು
  • ಗರಿಷ್ಠ ವಯಸ್ಸು: 23 ವರ್ಷಗಳು
  • 3.ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು.

    4.ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್-4 ಅಡಿಯಲ್ಲಿ 25,500 ರೂ.ನಿಂದ 81,100 ರೂಪಾಯಿ ವರೆಗಿನ ವೇತನವನ್ನು ನೀಡಲಾಗುತ್ತದೆ.

    5.ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್‌ಸೈಟ್​ಗೆ ಭೇಟಿ ನೀಡಿ: cisf.gov.in
  • CISF – 30 ಹೆಡ್ ಕಾನ್ಸೆಬಲ್ ಜನರಲ್ ಡ್ಯೂಟಿ (ಕ್ರೀಡಾ ಕೋಟಾ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
  • ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ. ಅಲ್ಲಿ ಅಂದರೆ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಅರ್ಜಿಯನ್ನು ಸಲ್ಲಿಸಿ ಮತ್ತು ದೃಢೀಕರಣವನ್ನು ಸಂಗ್ರಹಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌಗ್ಲೋಡ್ ಮಾಡಿಕೊಳ್ಳಿ.
  • 6.ಮುಖ್ಯ ಲಿಂಕ್‌ಗಳು:

  • ಅರ್ಜಿ ಸಲ್ಲಿಸಲು ಲಿಂಕ್: CISF ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2025 (https://cisf.gov.in)
  • ಅಧಿಕೃತ ಅಧಿಸೂಚನೆ: CISF ನೇಮಕಾತಿ ಅಧಿಸೂಚನೆ 2025 (https://cisf.gov.in)
  • ಆಯ್ಕೆ ಪ್ರಕ್ರಿಯೆ: ಕ್ರೀಡಾ ಪ್ರಯೋಗ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ

    ಗಮನಿಸಬೇಕಾದ ಪ್ರಮುಖ ಅಂಶಗಳು:

  • ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
  • ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ, ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು.
  • ಈ ನೇಮಕಾತಿ ಸರ್ಕಾರಿ ಉದ್ಯೋಗಕ್ಕೆ ಆಕಾಂಕ್ಷಿಗಳಿಗೆ ಒಂದು ಅತ್ಯುತ್ತಮ ಅವಕಾಶವಾಗಿದೆ. ಹೆಚ್ಚಿನ ವಿವರಗಳಿಗೆ CISFನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

    [ad_2]
    Source link

    Leave a Comment

    Click on the Ads to continue browsing. (Support the Developer)
    👇👇CLICK ADS WAIT & BACK👇👇