[ad_1]
Last Updated:
ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರ್‌ಬಾದ್ ಇಲ್ಲಿ ಮೇ 12 ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು.
ಮೈಸೂರು ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವಂತಹ ತಜ್ಞ ವೈದ್ಯಾಧಿಕಾರಿಗಳು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ(Medical Officer) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ (Direct Interview) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರ್‌ಬಾದ್ ಇಲ್ಲಿ ಮೇ 12 ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು. ಅರ್ಹರು ತಮ್ಮ ಎಲ್ಲಾ ಧೃಡೀಕೃತ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಎಂ.ಬಿ.ಬಿ.ಎಸ್. ತೇರ್ಗಡೆ(ಹೌಸ್‌ಮನ್ ಶಿಫ್ ಪೂರೈಸಿರಬೇಕು), ತಜ್ಞ ವೈದ್ಯಾಧಿಕಾರಿಗಳ ಹುದ್ದೆಗೆ ಎಂ.ಬಿ.ಬಿ.ಎಸ್. ಜೋತೆಗೆ ಸ್ನಾತಕೋತ್ತರ ( ಜನರಲ್ ಮೆಡಿಸಿನ್ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಹಾಗೂ ಅರವಳಿಕೆ ತಜ್ಞರು) ವಿದ್ಯಾರ್ಹತೆಯನ್ನು ಪಡೆದಿರಬೇಕು, ಮಾಸಿಕ ಸಂಚಿತ ವೇತನ, ಪ್ರೋತ್ಸಾಹಧನ ರೂ.60,000/- + 2000/- ನೀಡಲಾಗುತ್ತದೆ. 01. (ಜನರಲ್ ಮೆಡಿಸನ್ ಹುದ್ದೆಗೆ) ಪ್ರೋತ್ಸಾಹಧನ ರೂ.80,000/-(ಎಂಭತ್ತು ಸಾವಿರ) + 10,000/- 02. (ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಹಾಗೂ ಅರವಳಿಕೆ ತಜ್ಞರು ಹುದ್ದೆಗೆ) ರೂ.1,40,000/- (ಒಂದು ಲಕ್ಷದ ನಲವತ್ತು ಸಾವಿರ) ಮಾಸಿಕ ಸಂಚಿತ ವೇತನ ಮಾತ್ರ ನೀಡಲಾಗುವುದು.
ಈ ಎಲ್ಲಾ ಹುದ್ದೆಗಳಿಗೆ ಅನ್ವಯಿಸುವಂತೆ ಸಾಮಾನ್ಯ ಅಭ್ಯರ್ಥಿ: 42 ವರ್ಷ ಹಿಂದುಳಿದ ವರ್ಗ: 45 ವರ್ಷ ಪ.ಜಾತಿ, ಪ.ಪಂಗಡ: 47 ವರ್ಷ ವಯೋಮಿತಿಯನ್ನು ಮೀರಿರಬಾರದು.
ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಯಲ್ಲಿ 13 ಹುದ್ದೆಗಳು ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಲ್ಲಿ 3 ಹುದ್ದೆಗಳು ಇರುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mysore,Mysore,Karnataka
Source link