NEET Exam: ನೀಟ್​​ ಪರೀಕ್ಷೆಗೆ ಹೋಗುವ ಮುನ್ನ ಇದನ್ನು ತಿಳ್ಕೊಳ್ಳಿ! ಸರ, ಬಳೆ ಕೂಡ ಹಾಕೋ ಆಗಿಲ್ವಂತೆ / NEET Exam Guidelines: What You Must Know Before the Test — Avoid Jewelry and Accessories!

[ad_1]

ದೇಶಾದ್ಯಂತ ಇಂದು ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಂಪೂರ್ಣವಾಗಿ ತಯಾರಿ ನಡೆಸಿ ಇಂದಿನ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ಪರೀಕ್ಷೆ ಆಯೋಜನೆ ಮಾಡಲಾಗಿದ್ದು, ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ.

ಅಭ್ಯರ್ಥಿಗಳಿಗೆ ಸರ, ಬಳೆ, ಹೈ ಹಿಲ್ಸ್​ ಚಪ್ಪಲಿ ನಿಷೇಧ!

2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಂದರೆ ನೀಟ್​ ಪರೀಕ್ಷೆ ನಡೆಯುತ್ತಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ ನೀಟ್ (NEET) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸರ, ಬಳೆ, ಹೈ ಹಿಲ್ಸ್​ ಚಪ್ಪಲಿಯನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಸರ, ಬಳೆ, ಹೈ ಹಿಲ್ಸ್​ ಚಪ್ಪಲಿಯನ್ನು ಧರಿಸಿ ಹೋಗುವಂತಿಲ್ಲ.

381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ ಪರೀಕ್ಷೆ!

ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆ ಇಂದು ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಪರೀಕ್ಷೆಗೆ ಸಕಲ ತಯಾರಿ ಮಾಡಿಕೊಂಡಿದ್ದು, ಇಂದು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆ.11 ಗಂಟೆಯಿಂದ ಮ.1.30ರ ಒಳಗೆ ಹಾಜರಿರಬೇಕು!

ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಹಾಜರಿರಬೇಕು. ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು.

ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸರಿಯಾದ ಸಮಯದೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.

ನೀಟ್ ಪರೀಕ್ಷೆಯ ಮಾರ್ಗಸೂಚಿಗಳು ಏನು?

ಇನ್ನು ನೀಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ ನೀಡಿದೆ. ನಕಲು ತಡೆಯುವ ಉದ್ದೇಶದಿಂದ ಪರೀಕ್ಷಾರ್ಥಿಗಳಿಗೆ ಕೆಲವೊಂದು ವಸ್ತ್ರಸಂಹಿತೆಯನ್ನ ಕಡ್ಡಾಯ ಮಾಡಿದೆ. ಆ ಪ್ರಕಾರ ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹಿಲ್ ಚಪ್ಪಲಿ ನಿಷೇಧವಿದೆ. ಹಾಗೂ ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ.

ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮತ್ತು ಕಾಲರ್​​, ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

(ವರದಿ: ರಂಜನ್​, ನ್ಯೂಸ್​​ 18 ಕನ್ನಡ, ಬೆಂಗಳೂರು)

[ad_2]
Source link

Leave a Comment

Click on the Ads to continue browsing. (Support the Developer)
👇👇CLICK ADS WAIT & BACK👇👇